-->

UDUPI : ಅಕ್ರಮ ಗಣಿಗಾರಿಕೆ : 4 ಲಾರಿ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ

UDUPI : ಅಕ್ರಮ ಗಣಿಗಾರಿಕೆ : 4 ಲಾರಿ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು, ದಾಳಿ ನಡೆಸಿ 4 ಲಾರಿ ಸಹಿತ, 8 ಮೆಟ್ರಿಕ್ ಟನ್ ಮರಳು, 14 ಮೆಟ್ರಿಕ್ ಟನ್ ಕೆಂಪುಕಲ್ಲು ವಶಕ್ಕೆ ಪಡೆದಿದ್ದಾರೆ.  ಹಕ್ಲಾಡಿ ಗ್ರಾಮದ ಬಟ್ಟೆಕುದ್ರು ಪರಿಸರದ ಚಕ್ರ ನದಿಯಲ್ಲಿ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಣಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇಲಾಖೆಯ ಭೂ ವಿಜ್ಞಾನಿ  ಇಲಾಖೆ ದಾಳಿ ನಡೆಸಿ,  ಮತ್ತು 8 ಮೆಟ್ರಿಕ್ ಟನ್ ಮರಳು ಸಹಿತ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.  
ಆಲೂರು ಗ್ರಾಾಮದಲ್ಲಿನ ಅನಧಿಕೃತ ಕೆಂಪುಕಲ್ಲು ಕ್ವಾರಿಗಳಿಂದ ಕೆಂಪು ಕಲ್ಲು ಸಾಗಣೆ ಮಾಡುತ್ತಿದ್ದ ಮೂರು ಲಾರಿ ಮತ್ತು 14 ಮೆಟ್ರಿಕ್‌ ಟನ್ ಕೆಂಪುಕಲ್ಲುಗಳನ್ನು ಹೊಸಾಡು ಗ್ರಾಮದ ಬಂಟ್ವಾಡಿದಲ್ಲಿ ದಾಳಿ ನಡೆಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಉಡುಪಿ ಗಣಿ ಮತ್ತು ಭೂ ವಿಜ್ಞಾಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು, ಮುಂದಿನ ಕಾನೂನು ಕ್ರಮ ವಹಿಸುವ ವರೆಗೆ ಖನಿಜ ಸಹಿತ  ವಶಪಡಿಸಿಕೊಂಡಿರುವ ನಾಲ್ಕು ವಾಹನಗಳನ್ನು ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99