
UDUPI : ರಸ್ತೆ ಅವ್ಯವಸ್ಥೆ : ಕೇಸರಿ ಬಟ್ಟೆ ತೊಟ್ಟು ಹೊಂಡದಲ್ಲಿ ಉರುಳಾಡಿದ ಸಾಮಾಜಿಕ ಕಾರ್ಯಕರ್ತ
ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಯಲ್ಲಿ ಬರುವ ಇಂದ್ರಾಳಿ ಬ್ರಿಡ್ಜ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೀಗಾಗಿ
ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ರಸ್ತೆಯಲ್ಲಿ ಹೊರಳಾಡುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು.
ಇಂದ್ರಾಳಿ ಬ್ರಿಡ್ಜ್ ನ ಹೊಂಡ ಗುಂಡಿ ರಸ್ತೆಗೆ ಆರತಿ ಎತ್ತಿ, ತೆಂಗಿನಕಾಯಿ ಒಡೆದು, ಕೇಸರಿ ಬಟ್ಟೆ ತೊಟ್ಟು ರಸ್ತೆ ಮೇಲೆ ಉರುಳು ಸೇವೆ ಮಾಡುವ ಮೂಲಕ ವಿಶಿಷ್ಟವಾಗಿ ಪ್ರತಿಭಟಿಸಿದರು. ಈ ರಸ್ತೆ ಗೆ ಟೆಂಡರ್ ಆಗಿ ಮೂರು ವರ್ಷಗಳಿಂದ ರಸ್ತೆ ಹಾಳಾದರೂ ಯಾರೂ ಪ್ರಶ್ಬೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನರು ಈ ರಸ್ತೆಯಲ್ಲಿ ಸಂಚಾರ ನಡೆಸುತ್ತಾರೆ. ಸ್ವತಹ ಮುಖ್ಯಮಂತ್ರಿಗಳೇ ಈ ರಸ್ತೆಯಲ್ಲಿ ಸಂಚಾರ ಮಾಡಿದರೂ ಕೂಡಾ ಅವರ ಕಣ್ಣಿಗೂ ಈ ರಸ್ತೆಯ ಸಮಸ್ಯೆ ಕಂಡು ಬಂದಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದರು.