
UDUPI : ಭೀಕರ ರಸ್ತೆ ಅಪಘಾತ : ತಂದೆ, ಸ್ಥಳದಲ್ಲೇ ಸಾವು ಮಗ ಗಂಭೀರ
Wednesday, September 14, 2022
ಅಪರಿವಾಹನ ಢಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ಗಂಭೀರ ಗಾಯಗೊಂಡು ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಬೆಳಗಾವಿ ಮೂಲದ ಪ್ರಭಾಕರ್ ಕೋತ ಸಾವನ್ಪಿದ್ದು, ಸಮರ್ಥ್ (14) ಗಂಭೀರ ಗಾಯಗೊಂಡಿದ್ದಾರೆ.
ಮೃತ ಪ್ರಭಾಕರ್ ಹಾಗೂ ಅವರ ಮಗ ಸಮರ್ಥ್ ಬೆಳಗಾವಿಯಿಂದ, ಹೊರಟು ಕಾಪು ಸಮೀಪದ ಕುತ್ಯಾರಿನ ಆನೆಗುಂದಿ ಸಂಸ್ಥಾನದ ವಿದ್ಯಾ ಸಂಸ್ಥೆಯಲ್ಲಿ ಮಗನನ್ನು ದಾಖಲಾತಿ ಮಾಡಲು ಉಡುಪಿಗೆ ಆಗಮಿಸಿದರು. ಉಚ್ಚಿಲದಲ್ಲಿ ಬಸ್ಸಿನಿಂದ ಇಳಿದು ರಸ್ತೆ ಪಕ್ಕ ನಿಂತಿದ್ದಾಗ, ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಭಾಕರ್ ಮೃತಪಟ್ಟು, ಸಮರ್ಥ್ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡು ಮಗನನ್ನು ಉಡುಪಿಯ ಖಾಸಗಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಅಪಘಾತದ ತೀವ್ರತೆ ಅರಿತ ವಾಹನ ಚಾಲಕ ಸ್ಥಳದಲ್ಲಿ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ.