
UDUPI : ರಾತ್ರಿ ವೇಳೆ ಮನೆಗೆ ನುಗ್ಗಿ, ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು
ರಾತ್ರಿ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಪಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿಯ ಮನೆಯೊಂದರಲ್ಲಿ ನಡೆದಿದೆ.
ಇಲ್ಲಿನ ಪ್ರಸನ್ನ ನಾರಾಯಣ ಆಚಾರ್ಯ ಎಂಬವರ ಮನೆಯ ಬಾಗಿಲನ್ನು ಮುರಿದು ಕಳ್ಳರು ಒಳ ನುಗ್ಗಿದರು. ಬೆಡ್‌ರೂಂನ ಕಪಾಟಿನಲ್ಲಿದ್ದ ಚಿನ್ನದ ಲಕ್ಷ್ಮೀ ಹಾರ, ಬ್ರೇಸ್ಟೇಟ್, 4 ಬೆಳ್ಳಿಯ ಲೋಟಗಳು, 4 ಬೆಳ್ಳಿಯ ಚಮಚ ಹಾಗೂ 12,000 ರೂ. ನಗದು ಕಳವು ಮಾಡಿದ್ದಾರೆ. 3,66,000ರೂ. ಮೌಲ್ಯದ ಬಂಗಾರ ಕಳವಾಗಿದ್ದು, ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.