UDUPI : ಭೀಕರ ರಸ್ತೆ ಅಪಘಾತ : ತಂದೆ ಸಾವು ಮಗ ಗಂಭೀರ
ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್ ಢಿಕ್ಕಿ ಹೊಡೆದು ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಉಡುಪಿಯ ಬಂಟಕಲ್ಲು ಪೇಟೆಯಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಮೃತಪಟ್ಟವರು. ಶ್ರವಣ ಕುಮಾರ(6) ಗಾಯಗೊಂಡವರು.
ಶ್ರವಣಕುಮಾರನೊಂದಿಗೆ ಶರಣಪ್ಪ ದಿನಸಿ ತರಲು ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿರುವಾಗ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಈ ವೇಳೆ ಸವಾರ ಬೈಕನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಸೇರಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಶರಣಪ್ಪ ಮೃತಪಟ್ಟಿದ್ದಾರೆ. ಶ್ರವಣ ಕುಮಾರ ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.