UDUPI : ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ : ಸಚಿವ ಸುನೀಲ್ ವ್ಯಂಗ್ಯ
Saturday, September 24, 2022
ರಾಜ್ಯದಲ್ಲಿ ಪೇ ಸಿಎಂ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇದೇ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸುನೀಲ್ ಕುಮಾರ್, ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಆಧಾರ ರಹಿತ ಆರೋಪ ಮಾಡುತ್ತಿದೆ. ಪೇ ಸಿಎಂ ಎಂಬುದು ಕಾಂಗ್ರೆಸ್ನ ಸುಳ್ಳಿನ ಸುರಿಮಳೆ. ಪೋಸ್ಟರ್ ಅಂಟಿಸಿದ ಡಿಕೆಶಿ ಇಡಿ ಕಚೇರಿಗೆ ಹೋಗಿದ್ದು ಯಾಕೆ?ಈ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ಕೊಡಬೇಕು ಅಂತ ಹೇಳಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ವಿಚಾರಣೆಗೆ ಒಳಗಾಗಿ ಪೇಟಿಎಂ ಪೋಸ್ಟರ್ ಅಳವಳಿಸುತ್ತಾರೆ. ಕಾಂಗ್ರೆಸಿಗೆ ಪೇ ಸಿಎಂ ಪೋಸ್ಟರ್ ಅಂಟಿಸಲು ಯಾವ ನೈತಿಕತೆ ಇದೆ. ಅರ್ಕಾವತಿ ಇಂದಿರಾ ಕ್ಯಾಂಟೀನ್ ಹಾಸಿಗೆಯಲ್ಲಿ ಹಣ ನುಂಗಿದವರು ಕಾಂಗ್ರೆಸ್ಸಿಗರು. ಸಿದ್ದರಾಮಯ್ಯ ಭ್ರಷ್ಟಾಚಾರದ ಪಿತಾಮಹ ಅಂತ ಸುನೀಲ್ ವ್ಯಂಗ್ಯವಾಡಿದ್ದಾರೆ.
ಭ್ರಷ್ಟಾಚಾರದ ಉತ್ತುಂಗ ಏರಿಸಿದ ಕಾಂಗ್ರೆಸ್ಸಿಗರು ನಮ್ಮ ಕಾಮನ್ ಸಿಎಂ ಬಗ್ಗೆ ಮಾತನಾಡುತ್ತಾರೆ. ಭ್ರಷ್ಟಾಚಾರ ನಡೆದಿದ್ದರೆ ನ್ಯಾಯಾಲಯ ಮುಖ್ಯಮಂತ್ರಿಗಳು ಲೋಕಾಯುಕ್ತಕ್ಕೆ ದೂರು ಕೊಡಿ.10 ದಿನದ ಅಧಿವೇಶನದಲ್ಲಿ ಭ್ರಷ್ಟಾಚಾರದ ಬಗ್ಗೆ ಒಂದು ದಿನವು ಚರ್ಚೆ ನಡೆದಿಲ್ಲ
ಉಡುಪಿಯಲ್ಲಿ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸುನಿಲ್ ಕುಮಾರ್ ಹೇಳಿದ್ದಾರೆ.