UDUPI : ಪೇಜಾವರ ಶ್ರೀಗಳ ಎದೆ ಮೇಲೆ ಕಾಲಿಟ್ಟು ಸೊಪ್ಪು ತಿಂದ ಆಡು : ವಿಡಿಯೋ ವೈರಲ್
Tuesday, September 13, 2022
ಉಡುಪಿಯ ಪೇಜಾವರ ಮಠದ ಮಠಾಧೀಶ, ವಿಶ್ವ ಪ್ರಸನ್ನ ತೀರ್ಥರಿಗೆ ಪ್ರಾಣಿಗಳು ಅಂದ್ರೆ ವಿಶೇಷ ಪ್ರೀತಿ, ಉಡುಪಿಯ ನೀಲಾವರ ಗೋಶಾಲೆಯಲ್ಲಿ ಸಾವಿರಾರು ದೇಶಿಯ ಗೋಗಳನ್ನು ಸಾಕಿ ಸಲಹುತ್ತಿರೋದು ಇದಕ್ಕೆ ಸಾಕ್ಷಿ.
ಸದ್ಯ ನಿಲಾವರ ಗೋಶಾಲೆಯಲ್ಲಿ, ಎರಡು ಆಡುಗಳನ್ನು ಸಾಕುತ್ತಿದ್ದು, ಆಡು, ಪೇಜಾವರ ಶ್ರೀಗಳ ಎದೆ ಮೇಲೆ ತನ್ನ ಎರಡು ಕಾಲನ್ನು ಇಟ್ಟು ಸೊಪ್ಪು ತಿನ್ನಿಸುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದೆ.
ಉಡುಪಿಯ ಪೆರ್ಣಂಕಿಲ ದೇವಸ್ಥಾನದಲ್ಲಿ ಕುಟುಂಬವೊಂದು ಅಜದಾನ ಕೊಟ್ಟಿತ್ತು. ಸದ್ಯ, ಆ ಎರಡು ಆಡುಗಳನ್ನು ನೀಲಾವರ ಗೋಶಾಲೆಯಲ್ಲಿ ಸಾಕಲಾಗುತ್ತಿದೆ.
ಪೇಜಾವರ ಶ್ರೀಗಳು ನೀಲಾವರ ಗೋಶಾಲೆಗೆ ಇದ್ದಾಗ, ಆಡುಗಳಿಗೆ ಆಹಾರ ತಿನ್ನಿಸುತ್ತಾ ಅವುಗಳನ್ನು ಮುದ್ದು ಮಾಡುತ್ತಾರೆ. ಅದರಂತೆ ಶ್ರೀಗಳು, ಇತ್ತೀಚಿಗೆ ನೀಲಾವರ ಗೋಶಾಲೆಗೆ ಬಂದಾಗ, ಆಡಿಗೆ ಸೊಪ್ಪು ನೀಡಿದಾಗ ಆಡು ಪೇಜಾವರ ಶ್ರೀಗಳ ಎದೆಗೆ ತನ್ನ ಎರಡು ಕಾಲನಿಟ್ಟು, ಸೊಪ್ಪು ತಿನ್ನುತ್ತಿತ್ತು, ಇದನ್ನು ಸ್ಥಳದಲ್ಲೇ ಇದ್ದ ಭಕ್ತರೊಬ್ಬರು ತಮ್ಮ ಮೊಬೈಲ್‌ನಿಂದ ಸೆರೆ ಹಿಡಿದು ಸಾಮಾಜಿಕ, ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿಡಿಯೋ ಭಾರೀ ವೈರಲ್ ಆಗಿದ್ದು, ಶ್ರೀಗಳ ಪ್ರಾಣಿ ಪ್ರೀತಿಗೆ ಮೆಚ್ಚುಗೆ ವ್ಯಕ್ತವಾಗಿತ್ತು.