UDUPI : ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು
Thursday, September 15, 2022
ಕೆರೆಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲಾದ ಘಟನೆ ಉಡುಪಿಯ ಮಣಿಪಾಲದ ಮಣ್ಣಪಳ್ಳ ಕೆರೆಯಲ್ಲಿ ನಡೆದಿದೆ. ಕುಂದಾಪುರದ ಪ್ರಕಾಶ್ (35) ಮೃತಪಟ್ಟ ವ್ಯಕ್ತಿ.
ಮಣಿಪಾಲ ನಗರಲ್ಲಿ ಇರುವ ಮಣ್ಣಪಳ್ಳ ಕೆರೆಯಲ್ಲಿ ಮೀನು ಹಿಡಿಯಲು ಗಾಳ ಹಾಕುತ್ತಿದ್ದಾಗ, ಆಯತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮಣಿಪಾಲ ಠಾಣಾಧಿಕಾರಿ ರಾಜಶೇಖರ ಹೊಂದಾಳೆ, ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್ ಘಟನಾ ಸ್ಥಳದಲ್ಲಿದ್ದು ಮಹಜರು, ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ