UDUPI : ಡೆಲಿವರಿ ಬ್ಯಾಗ್ ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ : ಮೂವರ ಬಂಧನ
Sunday, September 18, 2022
ಉಡುಪಿ ನಗರದಲ್ಲಿ ಫುಡ್ ಡೆಲಿವರಿ ಬ್ಯಾಗ್ ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಉಡುಪಿ ಸೆನ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ರವಿ ಶಂಕರ್, ಅಂಜಲ್ ಬೈಜು ಹಾಗೂ ದೇವಿಪ್ರಸಾದ್ ಬಂಧಿತರು. ಕೇರಳದ ಪಾಲಕ್ಕಾಡ್ ನಿಂದ ಗಾಂಜಾವನ್ನು ರೈಲಿನ ಮೂಲಕ ಉಡುಪಿಗೆ ತಂದು ಉಡುಪಿಯಲ್ಲಿ ಗಾಂಜಾ ಸೇವಿಸುವವರಿಗೆ ಹಾಗೂ ಮಾರಾಟ ಮಾಡುವವರಿಗೆ ಕೊಡುತ್ತಿದ್ದರು, ಅಂತ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.
ಮಣಿಪಾಲ ಸಮೀಪದ ಮಂಚಿಯಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ಕೆಲವು ಸ್ನೇಹಿತರೊಂದಿಗೆ ಉಳಿದುಕೊಂಡಿದ್ದ. ಇಂದ್ರಾಳಿಯಿಂದ ಮಂಚಿಗೆ ಹೋಗುವ ರಸ್ತೆಯಲ್ಲಿ ಈ ಮೂವರು ಆರೋಪಿಗಳು ಝೂಮ್ಯಾಟೊ ಫುಡ್ ಡೆಲಿವರಿ ಬ್ಯಾಗ್ ನಲ್ಲಿ ಗಾಂಜಾವನ್ನು ಇಟ್ಟುಕೊಂಡು ಗಿರಾಕಿ ಹಾಗೂ ಪೆಡ್ಲರ್ ಗಳಿಗಾಗಿ ಕಾಯುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.