UDUPI : ಗುಂಡು ಹಾರಿಸಿಕೊಂಡು, ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ
Wednesday, September 14, 2022
ಗ್ರಾಮ ಪಂಚಾಯತ್ ಸದಸ್ಯರೊಬ್ಬರು, ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದುರ್ಗಾ ಗ್ರಾಮದಲ್ಲಿ ನಡೆದಿದೆ.
ದುರ್ಗಾ ಗ್ರಾಮ ಪಂಚಾಯತ್ ಸದಸ್ಯ ಭಾಸ್ಕರ್ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು.
ಗ್ರಾಮ ಪಂಚಾಯತ್ ಸದಸ್ಯರಾಗಿದ್ದ, ಭಾಸ್ಕರ ಹೆಗ್ಡೆ, ಸಾವಯವ ಕೃಷಿಕರಾಗಿ ಗುರುತಿಸಿಕೊಂಡಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣ ಎಂದು ಹೇಳಲಾಗುತಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.