UDUPI : ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಜಾಮೀನು : ತಾಯಿ ಬೇಸರ
Saturday, September 24, 2022
ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ ಬಗ್ಗೆ ಕೊಲೆಗೀಡಾದ ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಭಾಸ್ಕರ್ ಶೆಟ್ಟಿ ಕೊಲೆ ಆರೋಪಿ ಪತ್ನಿ ರಾಜೇಶ್ವರಿ, ಮಗ ನವನೀತ್ ಹಾಗೂ ಸಹಕಾರ ನೀಡಿದ ನಿರಂಜನ್ ಭಟ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಿಗೆ ಉಡುಪಿ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಆದರೆ, ಆ ಬಳಿಕ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿ ಜಾಮೀನು ಪಡೆದುಕೊಂಡಿದ್ದಾರೆ. ಜೀವಾವಧಿ ಶಿಕ್ಷೆಗೆ ಒಳಗಾದವರಿಗೆ ೬ ತಿಂಗಳೊಳಗೆ ಜಾಮೀನು ಸಾಧ್ಯನಾ? ಎಂದು ಹೈಕೋರ್ಟ್ ತೀರ್ಪಿನ ವಿರುದ್ಧ ಭಾಸ್ಕರ್ ಶೆಟ್ಟಿ ತಾಯಿ ಅಸಮಾಧಾನಗೊಂಡಿದ್ದಾರೆ. ಮುಂದಕ್ಕೆ ನಾವು ಸುಪ್ರೀಂ ಕೋರ್ಟ್ ಮೂಲಕ ಹೋರಾಟ ನಡೆಸುತ್ತೇವೆ ಎಂದು ಭಾಸ್ಕರ್ ಶೆಟ್ಟಿ ತಾಯಿ ಗುಲಾಬಿ ಶೆಟ್ಟಿ ಹೇಳಿಕೆ ನೀಡಿದ್ದಾರೆ.