
UDUPI : ನೇಣು ಬಿಗಿದು ಯುವತಿ ಆತ್ಮಹತ್ಯೆ
ನೇಣು ಬಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಕಾರ್ಕಳ ನಿಟ್ಟೆ ಗ್ರಾಮದ ಪರ್ಪಲೆ ನಿವಾಸಿ ಜಾರ್ಜ್ ಡಿ'ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಯುವತಿ.
ರೆನಿಟಾ ರವರಿಗೆ 11 ವರ್ಷದ ಹಿಂದೆ ಮುಲ್ಕಿಯ ಕಿರಣ್ ನೊಂದಿಗೆ ಮದುವೆಯಾಗಿದ್ದು, ಮದುವೆಯಾಗಿ 6 ವರ್ಷದಲ್ಲಿ ನ್ಯಾಯಾಲಯದಲ್ಲಿ ವಿವಾಹ ವಿಚ್ಚೇದನ ಆಗಿರುತ್ತದೆ. ರೆನಿಟಾ ರವರು ಕಳೆದ 2-3 ದಿನಗಳಿಂದ ತಲೆ ನೋವು ಆಗುತ್ತಿರುವುದಾಗಿ ತಿಳಿಸಿದ್ದರು. ನಿನ್ನೆ ಮನೆಯ ಹಿಂಬದಿಯ ಹಾದಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.