
UDUPI : ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? : ಶೋಭಾ ಕರಂದ್ಲಾಜೆ ಗರಂ
ಶೋಭಾ ಕರಂದ್ಲಾಜೆ ಹೆಸರು ಬದಲಿಸಿ ಶೋಭಾ ಗೌಡ ಎನ್ನುವ ಹೆಸರು ಇಟ್ಟುಕೊಳ್ಳುತ್ತಾರೆ ಅಂತ ಬಾರೀ ಸುದ್ದಿ ಹಬ್ಬಿತ್ತು. ಇದೇ ವಿಚಾರವಾಗಿ ಉಡುಪಿಯಲ್ಲಿ ಮಾಧ್ಯಮದವರು ಪ್ರಶ್ನೆ ಮಾಡಿದಾಗ ಶೋಭಾ ಪುಲ್ ಗರಂ ಆದ್ರು,
ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ.ಬರಾಜಕಾರಣಿಗಳನ್ನ ಕೆಲವರು ಜೋಕರ್ ಅಂದುಕೊಂಡಿದ್ದಾರೆ. ಮಾಧ್ಯಮ ,ಸಾಮಾಜಿಕ ,ರಾಜಕೀಯ ವಲಯ ಅಥವಾ ವಿರೋಧ ಪಕ್ಷ ಅಪಪ್ರಚಾರ ನಿಲ್ಲಿಸಿ.ಈ ರೀತಿ ಮಾಡುವವರಿಗೆ ಇದು ನನ್ನ ವಿನಮ್ರ ವಿನಂತಿ.ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ ಹೆಸರು ಬದಲಾಯಿಸಲು ನನಗೆ ತಲೆ ಕೆಟ್ಟಿದ್ಯಾ? ಅಂತ ಹೇಳಿದ್ದಾರೆ.