-->
UDUPI ; ಕೋವಿಶೀಲ್ಡ್ ವ್ಯಾಕ್ಸಿನ್‌ನಿಂದ ಪುರುಷರ ಫಲವತ್ತತೆಕಮ್ಮಿಯಾಗಲ್ವಂತೆ..!

UDUPI ; ಕೋವಿಶೀಲ್ಡ್ ವ್ಯಾಕ್ಸಿನ್‌ನಿಂದ ಪುರುಷರ ಫಲವತ್ತತೆಕಮ್ಮಿಯಾಗಲ್ವಂತೆ..!

ಕೊರೊನಾ ಬಾರದಂತೆ ತಡೆಗಟ್ಟಲು ತೆಗೆದುಕೊಳ್ಳುವ ಕೋವಿಶೀಲ್ಡ್ ವ್ಯಾಕ್ಸಿನ್‌ನಿಂದ ಪುರುಷರ ಫಲವತ್ತತೆಗೆ ಯಾವುದೇ ಹಾನಿ ಉಂಟಾಗುವುದಿಲ್ಲ. ವೀರ್ಯದ ಗುಣಮಟ್ಟದಲ್ಲೂ ಬದಲಾವಣೆ ಆಗುವುದಿಲ್ಲ ಅಂತ ಉಡುಪಿಯ ಮಣಿಪಾಲದ ಕಸ್ತೂರ್‌ಬಾ ಮೆಡಿಕಲ್ ಕಾಲೇಜಿನಲ್ಲಿ ಭಾರತೀಯ ಫರ್ಟಿಲಿಟಿ ತಜ್ಞರ ತಂಡ ನಡೆಸಿದ ಪೈಲಟ್ ಅಧ್ಯಯನದಲ್ಲಿ ಕಂಡುಕೊಂಡಿದೆ. 
ಸಂಶೋಧನೆಗಾಗಿ, 53 ಮಂದಿಯ ವೀರ್ಯವನ್ನು ಪರೀಕ್ಷೆಗೆ ತೆಗೆದು ಕೊಳ್ಳಲಾಗಿದೆ. ವ್ಯಾಕ್ಸಿನ್‌ನ ಮೊದಲ ಡೋಸ್ ತೆಗೆದುಕೊಳ್ಳುವ ಮೊದಲು ಅವರ ವೀರ್ಯವನ್ನು ಪರೀಕ್ಷೆಗಾಗಿ ತೆಗೆದುಕೊಂಡಿದ್ದರೆ, ವ್ಯಾಕ್ಸಿನೇಷನ್ ಆದ ಎರಡು ತಿಂಗಳ ನಂತರ ಮತ್ತೊಮ್ಮೆ ವೀರ್ಯದ ಗುಣಮಟ್ಟವನ್ನು ಪರೀಕ್ಷಿಸಲಾಗಿದೆ. ಕೊರೊನಾ ಪಾಸಿಟಿವ್ ಬಂದ ಅಥವಾ  ವ್ಯಕ್ತಿಗಳನ್ನು ಅಧ್ಯಯನಕ್ಕೆ ಪರಿಗಣಿಸಲಿಲ್ಲ. ವ್ಯಾಕ್ಸಿನ್ ಪಡೆದ ನಂತರವೂ ಇವರಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಾಗಿಲ್ಲ. ಈ ಸಂಶೋಧನೆಯಿಂದ ಭಾರತದಲ್ಲಿ ಉಪಯೋಗಿಸುವ ಕೋವಿಡ್ ವ್ಯಾಕ್ಸಿನ್‌ ಸುರಕ್ಷತೆಯ ಬಗ್ಗೆ ಭರವಸೆ ಮೂಡಿದೆ ಈ ಸಂಶೋಧನೆಯಿಂದ ವ್ಯಾಕ್ಸಿನೇಷನ್ ಬಗ್ಗೆ ಇದ್ದ ಹಲವು ಊಹಾಪೋಹ, ಆತಂಕಗಳು ದೂರವಾಗಿದೆ ಅಂತ ಸಂಶೋಧನೆ ನಡೆಸಿದ ತಜ್ಜರ ತಂಡದ ಐವರಲ್ಲಿ ಒಬ್ಬರಾದ  ಡಾ. ಸತೀಶ್ ಅಡಿಗ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article