UDUPI : ಬಿಎಎಂಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣ : ವಿದ್ಯಾರ್ಥಿ ಆತ್ಮಹತ್ಯೆ
Sunday, September 18, 2022
ವಿದ್ಯಾರ್ಥಿಯೊಬ್ಬ ಬಿಎಎಂಎಸ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪರ್ಕಳ ಸಮೀಪದ ಕಬ್ಯಾಡಿ ಎಂಬಲ್ಲಿ ನಡೆದಿದೆ. ಪೃಥ್ವಿ ಕುಲಕರ್ಣಿ(24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಪೃಥ್ವಿ ಕುಲಕರ್ಣಿ, ಬಿ.ಎ.ಎಂ.ಎಸ್ ಪದವಿಯಲ್ಲಿ ಅನುತ್ತೀರ್ಣಗೊಂಡದ್ದರಿಂದ ಒಂದು ವರ್ಷದಿಂದ ಮಾನಸಿಕವಾಗಿ ಇವರು ನೊಂದಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಹಾಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.