
UDUPI : ರಸ್ತೆ ದಾಟುವಾಗ ಬಸ್ ಢಿಕ್ಕಿ ಹೊಡೆದು ಮಹಿಳೆ
Wednesday, September 7, 2022
ರಸ್ತೆ ದಾಟುವ ವೇಳೆ ಬಸ್ ಢಿಕ್ಕಿ ಹೊಡೆದು ಮಹಿಳೆ ಸಾವನ್ಪಿದ ಘಟನೆ ಉಡುಪಿ ನಗರದ ಅಂಬಾಗಿಲಿನಲ್ಲಿರುವ ಅಮೃತ್‌ಗಾರ್ಡನ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ ಹೆಬ್ರಿ, ಚಾರಾ ಗ್ರಾಮದ ನಿವಾಸಿ ವಸಂತಿ ಶೆಟ್ಟಿ (65) ಮೃತಪಟ್ಟ ಮಹಿಳೆ.
ಅಮೃತ್‌ಗಾರ್ಡನ್ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವಸಂತಿ ಅವರು ಹೆದ್ದಾರಿ ದಾಟುತ್ತಿದ್ದಾಗ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಬಳಿಗೆ ತಲುಪುವಷ್ಟರಲ್ಲಿ ಕುಂದಾಪುರ ಕಡೆಯಿಂದ ಉಡುಪಿಗೆ ವೇಗವಾಗಿ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ತಲೆ, ಕೈ ಮತ್ತು ಕಾಲಿಗೆ ಗಂಭೀರ ಗಾಯವಾಗಿದ್ದು, ತತ್‌ಕ್ಷಣ ಅವರನ್ನು ಹೈಟೆಕ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ.