UDUPI : ಬೈಕ್‌ಗೆ ಢಿಕ್ಕಿ ಹೊಡೆದ ಲಾರಿ : ಬೈಕ್ ಸವಾರ ಸ್ಥಳದಲ್ಲೇ ಸಾವು
Monday, September 5, 2022
ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬೋಪಾಡಿ ಎಂಬಲ್ಲಿ ನಡೆದಿದೆ. ಸಲ್ಮಾನ್ ಸಾವನ್ಪಿದ ಬೈಕ್ ಸವಾರ.
ಕಾರ್ಕಳ ಕಡೆಯಿಂದ ರಂಗನಪಲೆ ಕಡೆಗೆ ತೆರಳುತ್ತಿದ್ದ ಲಾರಿ ಬೋಪಾಡಿಯಲ್ಲಿ ಸಲ್ಮಾನ್ ಬೈಕಿನಲ್ಲಿ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಲ್ಮಾನ್ ಬಿದ್ದು, ಹೆಲ್ಮಟ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಗೆ ಲಾರಿ ಚಾಲಕ ಸಿದ್ಧಿಕ್‌ನ ಅತೀ ವೇಗ ಹಾಗೂ ಅಜಾಗರೂಕತೆ ಚಾಲನೆಯೇ ಕಾರಣ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.