
UDUPI : ದುರ್ಗಾ ದೌಡ್ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು
ಅಕ್ಟೋಬರ್ 2 ರಂದು ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆಯಲಿರುವ ದುರ್ಗಾ ದೌಡ್ ಕಾರ್ಯಕ್ರಮಕ್ಕೆ ಶುಭಕೋರಿ ಗಂಗೊಳ್ಳಿ ದಾಕುಹಿತ್ತು ಹೋಗುವ ಮಾರ್ಗದಲ್ಲಿ ಬ್ಯಾನರ್ ಹಾಕಲಾಗಿತ್ತು. ಈ ಬ್ಯಾನರ್ ನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ.
ಬ್ಯಾನರ್ ಅಳವಡಿಸಿದ್ದ ಸ್ಥಳದ ಹಿಂಬದಿಯಲ್ಲೇ ಎಸ್.ಡಿ.ಪಿ.ಐ ಕಚೇರಿ ಇದೆ. ಹೀಗಾಗಿ ಎಸ್.ಡಿ.ಪಿ.ಐ ಕಾರ್ಯಕರ್ತರೇ ಹರಿದು ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಭೇಟಿ ನೀಡಿ ಹೊಸ ಬ್ಯಾನರ್ ನ್ನು ಅಳವಡಿಸಿದ್ದಾರೆ. ಗಂಗೊಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.