-->

ಹೊಸದಿಲ್ಲಿ: 11ರ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲಿಯೇ ಹಿರಿತ ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ; ಪ್ರಕರಣ ದಾಖಲು

ಹೊಸದಿಲ್ಲಿ: 11ರ ವಿದ್ಯಾರ್ಥಿನಿ ಮೇಲೆ ಶಾಲೆಯಲ್ಲಿಯೇ ಹಿರಿತ ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ; ಪ್ರಕರಣ ದಾಖಲು


ಹೊಸದಿಲ್ಲಿ: ರಾಷ್ಟ್ರದ ರಾಜಧಾನಿ ಹೊಸದಿಲ್ಲಿಯ ಕೇಂದ್ರೀಯ ವಿದ್ಯಾಲಯದ ಶೌಚಾಲಯದಲ್ಲಿಯೇ ಹನ್ನೊಂದರ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕೇಂದ್ರೀಯ ವಿದ್ಯಾಲಯ ಸಂಘಟನೆಯ ಪ್ರಾದೇಶಿಕ ಕಚೇರಿಯು ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿದೆ. ಈ ಆತಂಕಕಾರಿ ಘಟನೆಯು ಕಳೆದ ಜುಲೈನಲ್ಲಿ ನಡೆದಿದೆ ಎನ್ನಲಾಗಿದೆ. ಹೊಸದಿಲ್ಲಿ ಮಹಿಳಾ ಆಯೋಗವು ಈ ವಿಚಾರವನ್ನು ಬೆಳಕಿಗೆ ತಂದ ಬಳಿಕ ಮಂಗಳವಾರ ಸಂತ್ರಸ್ತ ಬಾಲಕಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮಹಿಳಾ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿ ಪೊಲೀಸರು ಹಾಗೂ ಕೇಂದ್ರೀಯ ವಿದ್ಯಾಲಯದ ಪ್ರಾಚಾರ್ಯರಿಗೆ ನೋಟಿಸ್ ನೀಡಿದೆ. 

ಇಂತಹ ಗಂಭೀರ ಪ್ರಕರಣವನ್ನು ಯಾವ ಕಾರಣಕ್ಕೆ ಪೊಲೀಸರ ಗಮನಕ್ಕೆ ತಂದಿಲ್ಲ ಎಂಬ ಬಗ್ಗೆ ವಿವರಣೆ ನೀಡಬೇಕೆಂದು ಶಾಲೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ. ಆದರೆ ಸಂತ್ರಸ್ತ ವಿದ್ಯಾರ್ಥಿನಿ ಅಥವಾ ಆಕೆಯ ಕುಟುಂಬದವರು ಶಾಲಾ ಪ್ರಾಚಾರ್ಯರಿಗೆ ಈ ವಿಷಯವನ್ನು ತಿಳಿಸಿಲ್ಲ. ಪೊಲೀಸ್ ತನಿಖೆ ನಡೆದ ಬಳಿಕವಷ್ಟೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಕೇಂದ್ರೀಯ ವಿದ್ಯಾಲಯ ಸಂಘಟನೆಯ ಅಧಿಕಾರಿಗಳು ಸಬೂಬು ಹೇಳಿದ್ದಾರೆ. 

ಶಾಲೆಯ ಒಳಗಡೆಯೇ 11ರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಗಂಭೀರ ಪ್ರಕರಣ ನಮ್ಮ ಗಮನಕ್ಕೆ ಬಂದಿದೆ. ಈ ಪ್ರಕರಣವನ್ನು ಮುಚ್ಚಿಹಾಕಲು ಶಾಲೆಯ ಶಿಕ್ಷಕರು ಪ್ರಯತ್ನಿಸಿದ್ದಾರೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ರಾಜಧಾನಿಯಲ್ಲಿ ಶಾಲೆಗಳು ಮಕ್ಕಳಿಗೆ ಅಸುರಕ್ಷಿತವಾಗಿರುವುದು ದುರದೃಷ್ಟಕರ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಳಿವಾಳ್ ಹೇಳಿದ್ದಾರೆ 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99