
ಮಠದಲ್ಲಿ ನೇಣುಬಿಗಿದುಕೊಂಡು ಸ್ವಾಮೀಜಿ ಆತ್ಮಹತ್ಯೆ
Monday, October 24, 2022
ರಾಮನಗರ : ಸ್ವಾಮೀಜಿ ಯೊಬ್ಬರು ಮಠದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದೆ. ಅವರ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.