ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ರೈಲ್ವೆ ಹಳಿ ಮೇಲೆ ಉರುಳಿ ಬಿದ್ದ ಕಾರಿನಲ್ಲಿ ಮೃತದೇಹ ಪತ್ತೆ: ಮೂವರು ಪೊಲೀಸ್ ವಶಕ್ಕೆ

ಹಾಸನ: ಇಲ್ಲಿನ ಶಾಂತಿಗ್ರಾಮದ ಬೆಣಗಟ್ಟೆ ಸಮೀಪದ ರೈಲ್ವೆ ಟ್ರ್ಯಾಕ್ ಮೇಲೆ ಮಂಗಳವಾರ ಮಧ್ಯಾಹ್ನ ಬೊಲೆರೋ ವಾಹನವೊಂದು ಉರುಳಿಬಿದ್ದಿದ್ದು, ಅದರಲ್ಲಿ ಮೃತದೇಹ ಪತ್ತೆಯಾಗಿದೆ. ಅದನ್ನು ಗಮನಿಸಿರುವ ಸ್ಥಳೀಯರು ತಕ್ಷಣ ಪೊಲೀಸ್ ತುರ್ತು ಸಂಖ್ಯೆಗೆ ಕರೆ ಮಾಡಿ ಸುದ್ದಿ ತಿಳಿಸಿದ್ದಲ್ಲದೆ ಕಾರಿನಲ್ಲಿದ್ದ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. 

ಮೃತದೇಹ ಹಾಗೂ ಉರುಳಿಬಿದ್ದ ಕಾರಿನಲ್ಲಿ ಸಿಲುಕಿದ್ದ ಮೂವರನ್ನು ವಶಕ್ಕೆ ಪಡೆದ ಪೊಲೀಸರು, ಮುಂದಿನ ವಿಚಾರಣೆಯೊಂದಿಗೆ ತನಿಖೆ ಆರಂಭಿಸಿದ್ದಾರೆ. ಕಾರಿನಲ್ಲಿದ್ದವರು ರಾಷ್ಟ್ರೀಯ ಹೆದ್ದಾರಿ 75 ರ ಬಳಿ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮೂವರು ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW