ಮಂಗಳೂರಿನ ತಣ್ಣೀರುಬಾವಿ ಬೀಚ್ ನಲ್ಲಿ ಕರಾವಳಿ ಉತ್ಸವಕ್ಕೆ ದಿನ ಫಿಕ್ಷ್!
Monday, October 3, 2022
ಮಂಗಳೂರು:- ಮುಂಬರುವ ಡಿಸೆಂಬರ್ 23 ರಿಂದ ಜನವರಿ ಒಂದರವರೆಗೆ ನಗರದ ತಣ್ಣೀರು ಬಾವಿ ಕಡಲ ತಡಿಯಲ್ಲಿ ಕರಾವಳಿ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು, ಅದಕ್ಕೆ ಅಗತ್ಯವಿರುವ ಉಪ ಸಮಿತಿಗಳ ರಚನೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಇಂಧನ, ಕನ್ನಡ ಮತ್ತು ಸಂಸ್ಕೃತಿಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.
ಈ ಕುರಿತು ಅವರು ಅ.3ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರಾವಳಿ ಉತ್ಸವಕ್ಕೆ ಸರ್ಕಾರದ ಅನುದಾನ, ಖಾಸಗಿ ಪ್ರಾಯೋಜಕತ್ವ, ಮೆರವಣಿಗೆ ಸಾಂಸ್ಕøತಿಕ ಕಾರ್ಯಕ್ರಮಗಳು, ವಸ್ತು ಪ್ರದರ್ಶನ, ಬೀಚ್ ಉತ್ಸವ, ರಿವರ್ ಫೆಸ್ಟಿವಲ್ ಆಯೋಜನೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ ಸಚಿವರು, ಕರಾವಳಿ ಉತ್ಸವವನ್ನು ಪ್ರಮುಖವಾಗಿ ಸಾಂಸ್ಕøತಿಕವಾಗಿ ಹಾಗೂ ಪ್ರವಾಸೋದ್ಯಮಕ್ಕೆ ಪೂರಕವಾಗಿ ಆಯೋಜನೆ ಮಾಡಲಾಗುವುದು, ಈ ಬಗ್ಗೆ ಉಪ ಸಮಿತಿಗಳಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು, ಈ ಉತ್ಸವ ಯಶಸ್ವಿಯಾಗಲು ಈ ಹಿಂದೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಅನುಭವ ಹಾಗೂ ಸಲಹೆ ಅಗತ್ಯ, ಸಹಕರಿಸುವಂತೆ ಸಚಿವರು ಕೋರಿದರು.
ತಣ್ಣೀರು ಬಾವಿ ಕಡಲ ತೀರ ಪ್ರಧಾನ ವೇದಿಕೆಯನ್ನಾಗಿ ಕಾರ್ಯಕ್ರಮ ರೂಪಿಸಲಾಗುವುದು,ಅಲ್ಲಿಯೇ ಆಹಾರ ಮೇಳವನ್ನು ಆಯೋಜಿಸಲಾಗುವುದು, ಕದ್ರಿ ಪಾರ್ಕ್ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಲ್ಲಿ ವಪಉಪ ವೇದಿಕೆಗಳಿಗೆ ಅವಕಾಶ ನೀಡಲಾಗುವುದು ಎಂದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಮಾತನಾಡಿ, ಕೋವಿಡ್ ಸೋಂಕಿನಿಂದಾಗಿ ಕಳೆದ ಎರಡು ವರ್ಷಗಳಿಂದ ಕರಾವಳಿ ಉತ್ಸವವನ್ನು ಹಮ್ಮಿಕೊಂಡಿಲ್ಲ, ಸಾಂಸ್ಕøತಿಕ ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಕಾನೂನು ಮತ್ತು ಸುವ್ಯವಸ್ಥೆ ಡಿ.ಸಿ.ಪಿ. ಅಂಶುಕುಮಾರ್ ಹಾಗೂ ಇತರರು ವೇದಿಕೆಯಲ್ಲಿದ್ದರು. ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜೇಶ್ ಸ್ವಾಗತಿಸಿದರು.