ಉತ್ತರ ಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ( MULAYAM SINGH YADAV) ನಿಧನ
Monday, October 10, 2022
ಹೊಸದಿಲ್ಲಿ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ( Mulayam Singh Yadav ) ಗುರುಗ್ರಾಮದ ವೇದಾಂತ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾದರು.
ಅವರಿಗೆ 82 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ಆಗಸ್ಟ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಮುಲಾಯಂ ಸಿಂಗ್ ಯಾದವ್ ಅವರು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು.