
ಬಂಟ್ವಾಳದಲ್ಲಿ Tikka ಪಾರ್ಸೆಲ್ ಪಡೆಯಲು ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ
Thursday, October 6, 2022
ಬಂಟ್ವಾಳ: ಅಪ್ರಾಪ್ತ ವಯಸ್ಕ ಬಾಲಕನು ಪಾರ್ಸೆಲ್ ಪಡೆಯಲು ಬಂದಿದ್ದ ವೇಳೆ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ , ಬೆದರಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಕಲ್ಲಡ್ಕದ ಕೋಳಿ ಟಿಕ್ಕಾ ಮಾರಾಟದ ಅಂಗಡಿಯೊಂದರ ಮಾಲೀಕ ಮಹಮ್ಮದ್ ಅಶ್ರಫ್ ಎಂಬಾತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಬಾಲಕ ಟಿಕ್ಕಾ ಪಾರ್ಸೆಲ್ ಕೇಳಿದಾಗ , ಕೊಂಡುಹೋಗಲು ಪ್ಲಾಸ್ಟಿಕ್ ಚೀಲವನ್ನು ಅಂಗಡಿಯ ಒಳಗೆ ತರುವಂತೆ ಹೇಳಿದ ಆರೋಪಿ ಬಾಲಕನ ಹಿಂಬದಿಯಿಂದ ಹೋಗಿ ಆತನನ್ನು ಹಿಡಿದು ಎತ್ತಿಕೊಂಡು ಅಲ್ಲೇ ಸಮೀಪದ ತೋಟಕ್ಕೆ ಕರೆದುಕೊಂಡು ಹೋಗಿ ಅಲ್ಲಿ ದೌರ್ಜನ್ಯ ಎಸಗಿದ್ದಾನೆ.
ಘಟನೆ ನಡೆದು ಎರಡು ತಿಂಗಳ ಬಳಿಕ ಮತ್ತೆ ದೌರ್ಜನ್ಯ ಎಸಗಲು ಪ್ರಯತ್ನಿಸಿದ ಆರೋಪ ಈತನ ಮೇಲಿದೆ . ಈ ಸಂದರ್ಭ ಬಾಲಕ ವಿರೋಧ ವ್ಯಕ್ತಪಡಿಸಿದಾಗ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ . ಈ ಬಗ್ಗೆ ಬಂಟ್ವಾಳ ನಗರ ಪೊಲೀಸರಿಗೆ ನೀಡಿದ ದೂರಿನಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ .