
Udupi : ಬಾಲಕಿ ಹೃದಯಾಘಾತದಿಂದ ಸಾವು : ಕಣ್ಣುಗಳನ್ನು ದಾನ ಮಾಡಿದ ಪೋಷಕರು
Friday, October 28, 2022
13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಕುಂದಾಪುರ ತಾಲೂಕಿನ ತಲ್ಲೂರಿನಿಂದ ನಡೆದಿದೆ. ಆಕೆಯ ಕಣ್ಣುಗಳನ್ನು ಪೋಷಕರು ದಾನ ಮಾಡಿ ಉದಾರತೆ ಮೆರೆದಿದ್ದಾರೆ. ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತಪಟ್ಟ ಪುಟ್ಟ ಬಾಲಕಿ. ಈಕೆ ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಕೊನೆಯುಸಿರೆಳೆದಿದ್ದಳು. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಅನುಶ್ರೀ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯ ಹಾಗೂ ಪಠ್ಯತರ ಚಟುವಟಿಕೆಗಳಲ್ಲಿ ಮುಂದಿದ್ದಳು. ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದೆ.