ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದ ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಮುಟ್ಟುಪಾಡಿ, ಪದವು, ಮಾರಿಗುಡಿ ಪರಿಸರದಲ್ಲಿ ಚಿರತೆ ಕಾಟ ಜನರನ್ನು ಆತಂಕಕ್ಕೆ ಕಾರಣವಾಗಿದೆ.
ಕೆಲ ದಿನಗಳಿಂದ ಊರಿನಲ್ಲಿ ಚಿರತೆ ಓಡಾಡುತ್ತಿದ್ದು, ಚಿರತೆ ಓಡಾಡುವ ವಿಡಿಯೋ ಊರವರೊಬ್ಬರು ಸೆರೆ ಹಿಡಿದಿದ್ದು, ವಿಡಿಯೋ ವೈರಲ್ ಆಗುತ್ತಿದೆ.
ಈ ವಿಡಿಯೋ ವೈರಲ್ ಆಗುತ್ತಲೇ ಸುತ್ತಲಿನ ಗ್ರಾಮಸ್ಥರು ಭಯಬೀತರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಿರತೆ ಹಿಡಿಯುವಂತೆ ಆಗ್ರಹಿಸಿದ್ದಾರೆ. ಸದ್ಯ ಇಲಾಖೆಯವರು ಚಿರತೆ ಹಿಡಿಯಲು ಗ್ರಾಮದಲ್ಲಿ ಬೋನು ಇರಿಸಿದ್ದಾರೆ.