ದುಬಾಯಿನಲ್ಲಿ ಗಡಿನಾಡ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ- ಆಮಂತ್ರಣ ಪತ್ರಿಕೆ ಬಿಡುಗಡೆ
Friday, November 4, 2022
ಮಂಗಳೂರು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಯುಎಇ ಘಟಕ ದುಬೈ ಇದರ ಆಶ್ರಯದಲ್ಲಿ ದುಬಾಯಿಯಲ್ಲಿ ನವಂಬರ್ 20 ರಂದು ನಡೆಯುವ ದುಬಾಯಿ ಗಡಿನಾಡ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗಡಿನಾಡ ಪ್ರಶಸ್ತಿ ಪ್ರದಾನ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಜಾನಪದ ಪರಿಷತ್ ನ ಅಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾಸರಗೋಡು ಜಿಲ್ಲಾಧ್ಯಕ್ಷ ಎ ಆರ್ ಸುಬ್ಬಯ್ಯ ಕಟ್ಟೆ, ಉತ್ಸವ ಸಮಿತಿ ಸಂಚಾಲಕ ಜೆಡ್ ಎ ಕಯ್ಯಾರ್, ಉದ್ಯಮಿ ಅರಿಬೈಲ್ ಗೋಪಾಲ ಶೆಟ್ಟಿ, ರಾಮಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.