-->

ಯಕ್ಷಗಾನ ಹಿರಿಯ ಕಲಾವಿದ , ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ನಿಧನ

ಯಕ್ಷಗಾನ ಹಿರಿಯ ಕಲಾವಿದ , ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ನಿಧನ


ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ,ಮಾಜಿ ಶಾಸಕರಾಗಿದ್ದ ಕುಂಬ್ಳೆ ಸುಂದರ್ ರಾವ್  Kumble Sundar rao (88) ಅವರು ಇಂದು ಕೊನೆಯುಸಿರೆಳೆದರು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಪಂಪ್ ವೆಲ್ ನ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ.ಕುಂಬ್ಳೆ ಸುಂದರ್ ರಾವ್ ಅವರು
ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧವಾಗಿದ್ದರು.   ಯಕ್ಷಗಾನದಲ್ಲಿ ಪ್ರಾಸಬದ್ಧ ಸಂಭಾಷಣೆ ಯಿಂದಲೇ ಹೆಸರುವಾಸಿ ಯಾಗಿದ್ದ ಅವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯನಿರ್ವಹಿಸಿದ್ದರು.  ಅವರು ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದರು. 50 ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದರು.

ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ  ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ್ದ ಅವರು ಸುರತ್ಕಲ್ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿ ಕುಂಬ್ಳೆ ಸುಂದರ್ ರಾವ್ ಸೇವೆ ಸಲ್ಲಿಸಿದ್ದರು.ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರು 1994 ರಿಂದ 1999ರವರೆಗೆ  ಸುರತ್ಕಲ್ ಕ್ಷೇತ್ರದ ಶಾಸಕರಾಗಿ  ಆಯ್ಕೆಯಾಗಿದ್ದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99