ದ.ಕ.ಜಿಲ್ಲಾ ಸಮಿತಿ NSUI ಪ್ರಧಾನ ಕಾರ್ಯದರ್ಶಿಯಾಗಿ ಸಫ್ವಾನ್ ಆಯ್ಕೆ
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆದ ದ.ಕ.ಜಿಲ್ಲಾ ಸಮಿತಿ ಎನ್.ಎಸ್.ಯು.ಐ "ಚಿಂತನ-ಮಂಥನ" ಕಾರ್ಯಕಾರಿಣಿ ಸಭೆಯಲ್ಲಿ ಸಫ್ವಾನ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಯಿತು.
ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುದ್ರೋಳಿ ಮೂಲದ ಸಫ್ವಾನ್ ಅವರು ಕಳೆದ 3 ವರ್ಷಗಳಿಂದ ಎನ್.ಎಸ್.ಯು.ಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾಗಿರುವ ಇವರು ವಿದ್ಯಾರ್ಥಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಆದೇಶ ಪ್ರತಿ ವಿತರಿಸಿದರು.
ಈ ಸಂದರ್ಭ ಎನ್‌ಎಸ್‌ಯುಐ ಕರ್ನಾಟಕ ರಾಜ್ಯಾಧ್ಯಕ್ಷ ಗಣೇಶ್ ಕೀರ್ತಿ, ಪ್ರಧಾನ ಕಾರ್ಯದರ್ಶಿ ಭರತ್ ರಾಮ್ ಗೌಡ, ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ ,ಎನ್‌ಎಸ್‌ಯುಐ ಕರ್ನಾಟಕ ಉಪಾಧ್ಯಕ್ಷ ಫಾರೂಕ್ ಬಯಾಬೆ, ಪ್ರಧಾನ ಕಾರ್ಯದರ್ಶಿ ಸುಹಾನ್ ಆಳ್ವ ಉಪಸ್ಥಿತರಿದ್ದರು.