
ಮಂಗಳೂರು ಆಟೋ ರಿಕ್ಷಾ ಸ್ಫೋಟ ಭಯೋತ್ಪಾದಕ ಕೃತ್ಯ: ಡಿಜಿಪಿ ಪ್ರವೀಣ್ ಸೂದ್ sood
ಮಂಗಳೂರಿನಲ್ಲಿ ನಡೆದ ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣ ಭಯೋತ್ಪಾದಕ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ
ಈ ಬಗ್ಗೆ ರಾಜ್ಯ ಪೊಲೀಸರು ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಘಟನೆ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರಿನ ಗರೋಡಿ ಬಳಿ ನಡೆದ ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣದಲ್ಲಿ ರಾಜ್ಯ ಪೊಲೀಸರು ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಘಟನೆ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಸ್ಪೋಟವು ಆಕಸ್ಮಿಕವಲ್ಲ, ಉದ್ದೇಶಪೂರ್ವಕವಾಗಿ ನಡೆದಿದೆ. ಗಂಭೀರ ಹಾನಿ ಉಂಟು ಮಾಡುವ ಉದ್ದೇಶದಿಂದ ಭಯೋತ್ಪಾದಕ ಕೃತ್ಯವನ್ನು ಎಸಗಲಾಗಿದೆ.
ರಾಜ್ಯ ಪೊಲೀಸರು ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಘಟನೆ ಬಗ್ಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.