-->
UDUPI : ಕಾಲೇಜಿನ ಬೀಗ ಮುರಿದು ಕಳ್ಳತನ

UDUPI : ಕಾಲೇಜಿನ ಬೀಗ ಮುರಿದು ಕಳ್ಳತನ

ಕಾಲೇಜಿನ ಬೀಗ ಮುರಿದು ಕಳ್ಳರು ಕೈ ಚಳಕ ಮೆರೆದ ಘಟನೆ ಉಡುಪಿಯ ಮಲ್ಪೆ  ಸರ್ಕಾರಿ ಪದವಿ ಪೂರ್ವ ಕಾಲೇಜಿಲ್ಲಿ ನಡೆದಿದೆ. ಈ ಬಗ್ಗೆ  ಕಾಲೇಜಿನ ಪ್ರಾಚಾರ್ಯರಾದ ವರ್ಗೀಸ್ ಪಿ  ಪೊಲೀಸರಿಗೆ ದೂರು ನೀಡಿದ್ದಾರೆ. ಕಾಲೇಜು ಸಿಬ್ಬಂದಿ ಮಧ್ಯಾಹ್ನದ ವೇಳೆ ಕಾಲೇಜಿನ ಕೊಠಡಿಗಳಿಗೆ ಬೀಗ ಹಾಕಿ ಹೋಗಿದ್ದರು. 
ಬೆಳಿಗ್ಗೆ 9 ಗಂಟೆ ವೇಳೆ ಕಾಲೇಜಿಗೆ ಬಂದು ನೋಡುವಾಗ ಕಳ್ಳತನ ನಡೆದಿರುವುದು ಕಂಡು ಬಂದಿದೆ. ಕಾಲೇಜಿನ ಪ್ರಾಚಾರ್ಯರ ಕೊಠಡಿ ಬಾಗಿಲನ್ನು ಮುರಿದು ಒಳ ನುಗ್ಗಿದ ಕಳ್ಳರು ಕಪಾಟಿನ ಬೀಗ ಮುರಿದು ಅದರಲ್ಲಿದ್ದ ಸರ್ಕಾರದಿಂದ ಜಿಲ್ಲಾ ಮಟ್ಟದ ಉತ್ತಮ ಫಲಿತಾಂಶಕ್ಕಾಗಿ ಕೊಟ್ಟಿ ಚಿನ್ನದ ಪದಕಗಳು ಹಾಗೂ 5,100 ನಗದು ಸೇರಿ ಒಟ್ಟು 75,100 ರೂ.ಮೌಲ್ಯದ ವಸ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಅಲ್ಲದೇ ಕಾಲೇಜಿನ ಕಂಪೌಂಡಿನ ಒಳಗೆ ಇರುವ ಸರ್ಕಾರಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರ ಕೊಠಡಿ ಮತ್ತು ಕಛೇರಿಯ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳ್ಳತನಕ್ಕೆ ಪ್ರಯತ್ನಿಸಿರುವುದಾಗಿ ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article