
UDUPI : ರೋಸ್‌ಗೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು
ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ಪಿದ ಘಟನೆ ಉಡುಪಿ ಜಿಲ್ಲೆಯ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ.
ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಸಾವನ್ಪಿದ ಯುವತಿ. ಜೋಸ್ನಾ ಲೂವಿಸ್, ಕೊಳಲಗಿರಿ ಹಾವಂಜೆಯಲ್ಲಿ ನಡೆದ ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ, ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಕುಸಿದುಬಿದ್ದರು. ಕೂಡಲೇ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಜೋಸ್ನಾ ಸಾವನ್ಪಿದ್ದಾರೆ.