
UDUPI : ತರಗತಿಯೊಳಗೆ ವಿದ್ಯಾರ್ಥಿಯನ್ನು ಟೆರರಿಸ್ಟ್ ಅಂತ ನಿಂದಿಸಿದ್ರಾ ಪ್ರೊಫೆಸರ್..!!
Monday, November 28, 2022
ತರಗತಿಯೊಳಗೆ ವಿದ್ಯಾರ್ಥಿಯನ್ನು, ಪ್ರೊಫೆಸರ್‌ಯೊಬ್ಬರು ಟೆರರಿಸ್ಟ್ ಅಂತ ನಿಂದಿಸಿದ್ದಾರೆ ಎನ್ನುದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಣಿಪಾಲದ ಖಾಸಗಿ ಕಾಲೇಜಿನಲ್ಲಿ ನಡೆದಿರುವ ಘಟನೆ ಎನ್ನಲಾಗಿದ್ದು, ಸದ್ಯ ವಿಡಿಯೋ ಟ್ವಿಟ್ಟರ್ ನಲ್ಲಿ ವೈರಲ್ ಅಗಿದೆ.
ನವೆಂಬರ್ 26ರಂದು ತರಗತಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಮಾತನಾಡುವ ಸಂದರ್ಭ, ಪ್ರೊಫೆಸರ್‌ಯೊಬ್ಬರು
ಮುಸ್ಲಿಮರು ಟೆರರಿಸ್ಟ್ ಗಳು ಎಂಬ ಅರ್ಥ ದಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಪ್ರೊಫೆಸರ್ ಮಾತಿಗೆ ತರಗತಿಯಲ್ಲಿ ವಿದ್ಯಾರ್ಥಿ, ಆಕ್ಷೇಪ ವ್ಯಕ್ತಪಡಿಸಿ, ಮುಸ್ಲಿಂ ಕಮ್ಯೂನಿಟಿಯನ್ನು ಟೆರರಿಸ್ಟ್ ಎಂದು ಕರೆಯಬೇಡಿ, ಅನಗತ್ಯ ತಮಾಷೆಯಾಗಿ ಈ ರೀತಿ ಮಾತನಾಡಬೇಡಿ ಎಂದಿದ್ದಾನೆ.
ವಿದ್ಯಾರ್ಥಿ, ಆಕ್ಷೇಪಿಸುತ್ತಿದ್ದಂತೆ ಪ್ರೊಫೆಸರ್ ಕ್ಷಮೆ ಕೇಳಿದ್ದು, ನೀವು ಕ್ಷಮೆ ಕೇಳಿದ ತಕ್ಷಣ ಮಾಡಿರುವ ಆರೋಪ ಬದಲಾಗಲ್ಲ ಅಂತ ವಿದ್ಯಾರ್ಥಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸದ್ಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕನನ್ನು ಅಮಾನತುಗೊಳಿಸಿ ಆಂತರಿಕ ತನಿಖೆಗೆ ನಿರ್ಧರಿಸಿದೆ. ಅಲ್ಲದೇ ವಿದ್ಯಾರ್ಥಿಗೂ ಕೌನ್ಸಿಲಿಂಗ್ ಮೂಲಕ ಸಾಂತ್ವನ ಹೇಳಿದೆ.