ಸುರತ್ಕಲ್ ಹತ್ಯೆ ಪ್ರಕರಣ- ನಾಲ್ಕು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ
Sunday, December 25, 2022
ಮಂಗಳೂರು: ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ಜಲೀಲ್ ಎಂಬವರ ಕೊಲೆ ನಡೆದ ಹಿನ್ನೆಲೆಯಲ್ಲಿ ಮಂಗಳೂರಿನ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹಾಕಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಸುರತ್ಕಲ್, ಬಜಪೆ,ಕಾವೂರು ಮತ್ತು ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಯಾವುದೇ ಘಟನೆಗಳು ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರದ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
. ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು 5 ಜನರು ಯಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು, ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು, ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಅಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ.
ಈ ನಿಷೇಧಾಜ್ಞೆಯು ಜ್ಯಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಯಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ. ನಿಷೇಧಾಜ್ಞೆಯು ಕ್ರಿಸ್ಮಸ್ ಆಚರಣೆ 1 ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಅಗತ್ಯ ಮತ್ತು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.