
29ರಿಂದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರ ಪ್ರವಾಸ
Wednesday, December 28, 2022
ಮಂಗಳೂರು:- ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಾದ ಎಸ್. ಅಬ್ದುಲ್ ನಜೀರ್ ಅವರು ಡಿ.29ರಿಂದ 31ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಡಿ.29ರ ಗುರುವಾರ ಸಂಜೆ 5.25ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಮೂಡಬಿದಿರೆಯ ಬೆಳುವಾಯಿ ಗ್ರಾಮಕ್ಕೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.
ಡಿ.30ರ ಶುಕ್ರವಾರ ಬೆಳಿಗ್ಗೆ 9.20ಕ್ಕೆ ಮೂಡಬಿದ್ರೆಯಿಂದ ಉಡುಪಿಗೆ ತೆರಳುವರು. ಸಂಜೆ 4.30ಕ್ಕೆ ಮೂಡಬಿದಿರೆಗೆ ಆಗಮಿಸಿ, ಅಲ್ಲಿ ನೂತನವಾಗಿ ನಿರ್ಮಿಸಲಾದ ಬಾರ್ ಅಸೋಸಿಯೇಷನ್ ಕಟ್ಟಡವನ್ನು ಉದ್ಘಾಟಿಸುವರು. ರಾತ್ರಿ 7 ಗಂಟೆಗೆ ಅಲ್ಲಿಂದ ಹೊರಡುವರು.
ಡಿ.31ರ ಶನಿವಾರ ಸಂಜೆ 6.05ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರು ತಲುಪುವರು ಎಂದು ಪ್ರಕಟಣೆ ತಿಳಿಸಿದೆ.
ರಾಜ್ಯ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಡಿ.29ರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಡಿ.29ರ ಸಂಜೆ 5.55ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ವಾಸ್ತವ್ಯ ಹೂಡುವರು.
ಡಿ.30ರ ಶುಕ್ರವಾರ ಬೆಳಿಗ್ಗೆ 9ಕ್ಕೆ ಮಂಗಳೂರಿನಿಂದ ಉಡುಪಿಗೆ ತೆರಳುವರು. ಸಂಜೆ 4.30ಕ್ಕೆ ಉಡುಪಿಯಿಂದ ಮೂಡಬಿದಿರೆಗೆ ಆಗಮಿಸಿ, ಅಲ್ಲಿ ನೂತನವಾಗಿ ನಿರ್ಮಿಸಲಾದ ಬಾರ್ ಅಸೋಸಿಯೇಷನ್ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸುವರು. ರಾತ್ರಿ 10.15ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರು ತಲುಪುವರು ಎಂದು ಪ್ರಕಟಣೆ ತಿಳಿಸಿದೆ.