ಪ್ರಧಾನಿ ನರೇಂದ್ರ ಮೋದಿ ತಾಯಿ ನಿಧನ
Friday, December 30, 2022
ಗುಜರಾತ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು(100) ಇಂದು ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ನಿನ್ನೆಯಷ್ಟೇ ವೈದ್ಯರು ಘೋಷಣೆಯನ್ನು ಮಾಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ’’ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ .. ನನ್ನ ತಾಯಿಯಲ್ಲಿ ನಾನು ಯಾವಾಗಲೂ ಆ ತ್ರಿಮೂರ್ತಿಗಳ ಶಕ್ತಿ ಹಾಗೂ ಪ್ರೀತಿ, ವಾತ್ಸಲ್ಯವನ್ನು ಅನುಭವಿಸಿದ್ದೇನೆ, ಅವರದ್ದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ ಮತ್ತು ಮೌಲ್ಯಗಳಿಗೆ ಬದ್ಧವಾಗಿರುವ ಜೀವನವನ್ನು ಒಳಗೊಂಡಿದೆ‘‘ ಎಂದು ಗುಣಗಾನ ಮಾಡಿದ್ದಾರೆ.
ತಾಯಿ ನಿಧನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಅಹಮದಾಬಾದ್‌ಗೆ ತೆರಳಿದ್ದಾರೆ. ಹೌರಾ, ಕೋಲ್ಕತ್ತಾದಲ್ಲಿ ವಂದೇ ಭಾರತ್ ರೈಲಿಗೆ ಫ್ಲ್ಯಾಗ್‌ಆಫ್ ಮತ್ತು ರೈಲ್ವೆಯ ಇತರ ಅಭಿವೃದ್ಧಿ ಕಾಮಗಾರಿಗಳು ಮತ್ತು ನಮಾಮಿ ಗಂಗೆ ಅಡಿ ನಡೆಯುತ್ತಿದ್ದ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಇಂದು ಪಾಲ್ಗೊಳ್ಳಬೇಕಿತ್ತು. ಹಿಂದಿನ ಯೋಜನೆಯಂತೆ ಈ ಕಾರ್ಯಕ್ರಮಗಳು ನಡೆಯಲಿವೆ ಎನ್ನಲಾಗಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಬಹುದು ಎಂದು ಹೇಳಲಾಗಿದೆ.
शानदार शताब्दी का ईश्वर चरणों में विराम... मां में मैंने हमेशा उस त्रिमूर्ति की अनुभूति की है, जिसमें एक तपस्वी की यात्रा, निष्काम कर्मयोगी का प्रतीक और मूल्यों के प्रति प्रतिबद्ध जीवन समाहित रहा है। pic.twitter.com/yE5xwRogJi
— Narendra Modi (@narendramodi) December 30, 2022