-->

UDUPI : ಸ್ನೇಹಿತನನ್ನು ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

UDUPI : ಸ್ನೇಹಿತನನ್ನು ಕೊಲೆಗೈದ ಆರೋಪಿಗೆ ಜೀವಾವಧಿ ಶಿಕ್ಷೆ

ಐದು ವರ್ಷಗಳ ಹಿಂದೆ ಹಣಕ್ಕಾಗಿ ಸ್ನೇಹಿತನನ್ನು ಕೊಲೆಗೈದ ಪ್ರಕರಣ ಆರೋಪಿಗೆ ಕೊಲೆ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ, 50,000 ರೂ ದಂಡ ಹಾಗು ದಲಿತ ದೌರ್ಜನ್ಯ ತಡೆ ಕಾಯ್ದೆಯಲ್ಲಿ 3 ವರ್ಷ ಕಾರಾಗೃಹ ಶಿಕ್ಷೆ 10,000 ದಂಡ ವಿಧಿಸಿ ಉಡುಪಿ  ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದ್ದಾರೆ. 
ಉಡುಪಿಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮ ಪ್ರಶಾಂತ್ ಅಲಿಯಾಸ್ ಪಚ್ಚು ಅಲಿಯಾಸ್ ಮಣಿ (31) ಶಿಕ್ಷೆಗೆ ಗುರಿಯಾದ ಆರೋಪಿ. 2017 ರ ಮಾರ್ಚ್ 1ರಂದು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಪೇತ್ರಿ ಬಳಿ, ಪ್ರಶಾಂತ್ ಖರ್ಚಿಗಾಗಿ ಹಣವನ್ನು ಕೇಳಿದಾಗ ಪ್ರಕಾಶ್ ನಾಯ್ಕ್ (38) ಹಣ ನೀಡಲು ನಿರಾಕರಿಸಿದ್ದಾರೆ. ಈ ವೇಳೆ ಪ್ರಶಾಂತ್ ಚೂರಿಯಿಂದ ಇರಿದು ಕೊಲೆ ಮಾಡಿದ್ದನು.  ತನಿಖೆಯನ್ನು ಪೂರ್ಣಗೊಳಿಸಿದ್ದ ಅಂದಿನ ಡಿವೈಎಸ್ಪಿ ಕುಮಾರ್ ಸ್ವಾಮಿ 27-5-2017 ರಂದು ದೋಷರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣಲ್ಲಿ ಒಟ್ಟು 34 ಸಾಕ್ಷಿಗಳ ಪೈಕಿ, 2 ಪ್ರತ್ಯಕ್ಷ ಸಾಕ್ಷಿಗಳನ್ನು ಒಳಗೊಂಡಂತೆ ಒಟ್ಟು 12 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. 


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99