UDUPI : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಾಧಿಕಾರಿ
Wednesday, December 21, 2022
ಗ್ರಾಮ ಲೆಕ್ಕಾಧಿಕಾರಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಉಡುಪಿಯ ಪೆರ್ಣಂಕಿಲದಲ್ಲಿ ನಡೆದಿದೆ. ಹರೀಶ್ ಎನ್.ಪಿ ಎಂಬಾತ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗ್ರಾಮ ಲೆಕ್ಕಾಧಿಕಾರಿ. ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ ಹರೀಶ್ ಎನ್‌ಪಿ 10 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ.
ಈ ಬಗ್ಗೆ ಪಿರ್ಯಾದುದಾರರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದರು. ಅದರಂತೆ ದೂರುದಾರ 10 ಸಾವಿರ ನೀಡುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ಪಡೆದುಕೊಳ್ಳುತ್ತಿದ್ದಾಗ ಗ್ರಾಮ ಲೆಕ್ಕಾಧಿಕಾರಿಯನ್ನು ರೆಡ್ ಹ್ಯಾಂಡಾಗಿ ಬಲೆಗೆ ಸಿಲುಕಿಸಿದ್ದಾರೆ. ಆರೋಪಿಯನ್ನು ದಸ್ತಗಿರಿ ಮಾಡಿ, ಲಂಚದ ಹಣವನ್ನು ವಶಪಡಿಸಿಕೊಂಡ ಉಡುಪಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.