ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಕೀರ್ತನಾ (೧೯) ಮೃತ ವಿದ್ಯಾರ್ಥಿನಿ.
ಕೀರ್ತನಾ, ಕಾರ್ಕಳದ ಎಂ.ಪಿ.ಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.