UDUPI : ಕಾಂತಾರ ರಿಷಬ್ ಶೆಟ್ಟಿ ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ, ವಿನಾಯಕನಿಗೆ ವಿಶೇಷ ಪೂಜೆ
Monday, December 5, 2022
ಕಾಂತಾರ ಸಿನಿಮಾ ಸಿನಿಮಾ ರಂಗದಲ್ಲಿ ಹೊಸ ಸಂಚಲನ ಮೂಡಿಸಿದ ರಿಷಭ್ ಶೆಟ್ಟಿ, ಸದ್ಯ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ.
ಇತ್ತೀಚಿಗಷ್ಟೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದ ರಿಷಬ್ ಇದೀಗ ಆನೆಗುಡ್ಡೆಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ಆನೆಗುಡ್ಡೆ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ರಿಷಭ್ ಅವರ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.