UDUPI : ದುಬೈನಲ್ಲಿ ಉಡುಪಿ ಮೂಲದ ವಿದ್ಯಾರ್ಥಿ ಅನಾರೋಗ್ಯದಿಂದ ಸಾವು
Tuesday, December 6, 2022
ಪದವಿ ಶಿಕ್ಷಣ ಪಡೆಯಲು ದುಬೈಗೆ ತೆರಳಿದ್ದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯಕ್ಕೀಡಾಗಿ ನಿಧನವಾದ ಘಟನೆ ನಡೆದಿದೆ. ಅಹ್ಮದ್ ಬಿಲಾಲ್ ಕಾಪು(20) ನಿಧನನಾದ ವಿದ್ಯಾರ್ಥಿ.
ಉಡುಪಿಯಲ್ಲಿ ದ್ವಿತೀಯ ಪಿಯುಸಿ, ಮುಗಿಸಿ ಪದವಿ ಶಿಕ್ಷಣಕ್ಕಾಗಿ ತೆರಳಿದ್ದರು. ಆದರೆ ಆ ಬಳಿಕ ಜ್ವರಕ್ಕೆ ತುತ್ತಾಗಿದ್ದರು. ನ್ಯುಮೋನಿಯಾ ಕೂಡ ಕಾಡಿದ್ದರಿಂದ ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಕುವೈಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ, ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಮೃತಪಟ್ಟಿದ್ದಾರೆ.