UDUPI : ನೂರಾರು ಕೋಟಿ ರೂ. ವಂಚನೆ : ಲಕ್ಷ್ಮೀ ನಾರಾಯಣ ಉಪಾಧ್ಯಾಯ ಬಂಧನ
Thursday, December 29, 2022
ಉಡುಪಿ ನಗರದ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಠೇಣಿದಾರರಿಗೆ ನೂರಾರು ಕೋಟಿ ರೂ. ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸಂಘದ ಅಧ್ಯಕ್ಷ ಬಿ.ವಿ. ಲಕ್ಷ್ಮೀ ನಾರಾಯಣ ಉಪಾಧ್ಯಾಯರನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನೂರಾರು ಮಂದಿ ಠೇವಣಿದಾರಿಗೆ, ಲಕ್ಷ್ಮೀನಾರಾಯಣ ಉಪಾಧ್ಯಾಯ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಕೋಟ್ಯಾಂತರ ರೂ. ಸಂಗ್ರಹಿಸಿ, ಹಿಂದಿರುಗಿಸದೆ ವಂಚಿಸಿದ್ದನು. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸುತ್ತಿರುವ ಪೊಲೀಸರು ತಲೆಮರೆಸಿಕೊಂಡಿದ್ದ ಸೊಸೈಟಿ ಮುಖ್ಯಸ್ಥನನ್ನು ಬಂಧಿಸಿದ್ದಾರೆ.