ಉಚಿತ ವಿದ್ಯುತ್ ಘೋಷಣೆಯ ಬೆನ್ನಿಗೆ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ನಗದು - ಚುನಾವಣೆ ಗೆ ಜನಪ್ರಿಯ ಘೋಷಣೆ ಮಾಡುತ್ತಿದೆ ಕಾಂಗ್ರೆಸ್
Monday, January 16, 2023
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮಹಿಳೆಗೆ ಪ್ರತಿ ತಿಂಗಳು 2,000 ರೂ- ಪ್ರಿಯಾಂಕಾ ಗಾಂಧಿ
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 200 ಯುನಿಟ್ ವಿದ್ಯುತ್ ಉಚಿತ ಘೋಷಣೆ ಮಾಡಿದ ಕಾಂಗ್ರೆಸ್ ಇಂದು ಪ್ರತಿ ಕುಟುಂಬದ ಓರ್ವ ಮಹಿಳೆಗೆ ಪ್ರತಿ ತಿಂಗಳು 2,000 ಹಣ ನೀಡುವುದಾಗಿ ಘೋಷಣೆ ಮಾಡಿದೆ.
AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಮಹಿಳಾ ಕಾಂಗ್ರೆಸ್‌ನ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಈ ಭರವಸೆ ನೀಡಿದರು.
ರಾಜ್ಯ ಕಾಂಗ್ರೆಸ್‌ನ ಮಹಿಳಾ ಪ್ರಣಾಳಿಕೆಯ ಕೆಲವು ಪ್ರಮುಖ ವಿಚಾರಗಳನ್ನು ಘೋಷಣೆ ಮಾಡಿದ ಅವರು ಅಷ್ಟೇ ಅಲ್ಲದೇ ವೇದಿಕೆ ಮೇಲೆ ಗೃಹ ಲಕ್ಷ್ಮಿ ಬಾಂಡ್ ಅನ್ನು ಪ್ರಿಯಾಂಕಾ ಗಾಂಧಿ ಪ್ರದರ್ಶನ ಮಾಡಿದರು.
ಪ್ರತಿ ಕುಟುಂಬದ ಮಹಿಳೆಗೆ ಪ್ರತಿ ತಿಂಗಳು 2,000 ಹಣ ಕೊಡುವುದಾಗಿ ಘೋಷಣೆ ಮಾಡಿ, ಪಕ್ಷದ ವತಿಯಿಂದ ಮಾದರಿ ಚೆಕ್ ನ್ನು ಇದೇ ವೇಳೆ ಪ್ರದರ್ಶನ ಮಾಡಲಾಯಿತು. ಈ ವೇಳೆ ವೇದಿಕೆಯ ಮೇಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಚೆಕ್‌ಗೆ ಸಹಿ ಹಾಕಿ ಕಾಂಗ್ರೆಸ್ ಸರ್ಕಾರ ಬಂದರೆ ಹೀಗೆ ಸಹಿ ಹಾಕಿ ಚೆಕ್ ಕೊಡುತ್ತೇವೆ ಎಂದು ಬೃಹತ್ ಚೆಕ್ ಪ್ರದರ್ಶನ ಮಾಡಿದ್ದಾರೆ.