ಸುದ್ದಿಗಳು
ಲೋಡ್ ಆಗುತ್ತಿದೆ...

ಮಂಗಳೂರಿನಲ್ಲಿ 20 ವರ್ಷದ ಯುವತಿ ನಾಪತ್ತೆ !


ಮಂಗಳೂರು: ನಗರದಲ್ಲಿ 20 ವರ್ಷದ  ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಕೆ ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದಳು.

ಕಮಲಾಕ್ಷ ಎಂಬವರ ಪುತ್ರಿಯಾಗಿರುವ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಮನೆಗೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.

ಮನೆಯಿಂದ ಹೊರಟು ಹೋದಾಗ ಹಸಿರು ಬಣ್ಣದ ಟಾಪ್ ಹಾಗೂ ಗೋಲ್ಡನ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈಕೆಯನ್ನು ಕಂಡವರು ಸುರತ್ಕಲ್ ಠಾಣೆ (0824-2220540, 9480805360, 9480802345) ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ (0824-2220800) ಮಾಹಿತಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.
ಸುದ್ದಿ ಹಂಚಿಕೊಳ್ಳಿ:
ಇತ್ತೀಚಿನ ಸುದ್ದಿಗಳು
×

WhatsApp Channel

ಬ್ರೇಕಿಂಗ್ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಚಾನೆಲ್ ಸೇರಲು ಇಲ್ಲಿ ಕ್ಲಿಕ್ ಮಾಡಿ.

JOIN NOW