
ಈತನ ವಯಸ್ಸು 24... ಆದರೆ ಈತ ಮಂಗಳೂರಿನ ಜನರಿಗೆ ನಶೆಯೇರಿಸಲು ಮಾಡುತ್ತಿದ್ದ ಘನಂಧಾರಿ ಕೆಲಸ!
Sunday, January 8, 2023
ಮಂಗಳೂರು ; ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಾರುತಿ ಅಲ್ಟೋ 800 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 27.100 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬಂಬ್ರಾಣ ಗ್ರಾಮದ ಪೊಯ್ಯೆವಳಪ್ಪು ಮನೆ, ಮುಗೇರ್ ನ ಕಿರಣ್ ರಾಜ್ ಶೆಟ್ಟಿ, (24) ಬಂಧಿತ ಆರೋಪಿ.
ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಾರುತಿ ಅಲ್ಟೋ 800 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ಸಿಸಿಬಿ ಪೊಲೀಸರು ನೀರುಮಾರ್ಗದ ಕುಟ್ಟಿಕಳ ಎಂಬಲ್ಲಿ ಪತ್ತೆ ಹಚ್ಚಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನ್ನು ಬಂಧಿಸಿದ್ದಾರೆ.
ಈತನನ್ನು ವಶಕ್ಕೆ ಪಡೆದುಕೊಂಡು ಆರೋಪಿಯ ವಶದಲ್ಲಿದ್ದ ಮಾರುತಿ ಅಲ್ಟೋ 800 ಕಾರು ನಂಬ್ರ:KL-14-W-2182 ನೇದನ್ನು ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 27.100 ಕೆಜಿ ಗಾಂಜಾವನ್ನು, ಮೊಬೈಲ್ ಫೋನ್, ನಗದು ರೂ. 1500/- ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಾರುತಿ ಅಲ್ಟೋ ಕಾರು, ಮೊಬೈಲ್ ಫೋನ್ ನ ಒಟ್ಟು ಮೌಲ್ಯ ರೂ. 9,88,500/- ಆಗಿರುತ್ತದೆ.
ಆರೋಪಿಯು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದನು.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿ ಕಿರಣ್ ರಾಜ್ ಶೆಟ್ಟಿಯ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯು ಕರ್ನಾಟಕ- ಕೇರಳ ರಾಜ್ಯದ ಗಡಿಭಾಗದವನಾಗಿದ್ದು, ಕರ್ನಾಟಕ, ಕೇರಳದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡಿ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು, ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದನು.
ಈ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಮಂಗಳೂದು ದಕ್ಷಿಣ ಉಪ ವಿಭಾಗದ ಎಸಿಪಿ ರವರಾದ ಶ್ರೀ ದಿನಕರ ಶೆಟ್ಟಿ, ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ ಪಿಎಸ್ಐ ರಾಜೇಂದ್ರ ಬಿ, ಎಎಸ್ಐ ಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.