-->

ಜನವರಿ 30ರಂದು ಹುತಾತ್ಮರ ದಿನಾಚರಣೆ- ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ

ಜನವರಿ 30ರಂದು ಹುತಾತ್ಮರ ದಿನಾಚರಣೆ- ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ


ಮಂಗಳೂರು:- ದೇಶದ ಸ್ವತಂತ್ರ ಸಂಗ್ರಾಮದಲ್ಲಿ ಹುತಾತ್ಮರಾದವರ ಜ್ಞಾಪಕಾರ್ಥವಾಗಿ ಪ್ರತಿ ವರ್ಷದ ಜನವರಿ 30ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ.

     ಅದರಂತೆ 2023ರ ಜ.30ರ ಮೌನ ಆಚರಣೆಗೆ ಕೇಂದ್ರ ಸರ್ಕಾರದ ಸೂಚನೆಯಂತೆ ಕೆಳಕಂಡ ಸ್ಥಾಯಿ ಸೂಚನೆಗಳನ್ನು ಪ್ರಕಟಿಸಲಾಗಿದೆ.

ಅವುಗಳು ಇಂತಿವೆ:

ಜ. 30ರ ಬೆಳಿಗ್ಗೆ 11 ಗಂಟೆಗೆ ರಾಜ್ಯದಲ್ಲಿಡೆ ಎರಡು ನಿಮಿಷಗಳ ಕಾಲ ಮೌನ ಆಚರಿಸುವುದು.

     ಎಲ್ಲಿ ಸೈರನ್ ಗಳು ಅಥವಾ ಸೈನಿಕರ ಬಂದೂಕುಗಳು ಲಭ್ಯವಿದೆಯೋ ಅಲ್ಲಿ ಎರಡು ನಿಮಿಷಗಳ ಮೌನ ಆಚರಣೆಯ ಕಾಲವನ್ನು ಪ್ರಾರಂಭ ಮತ್ತು ಮುಕ್ತಾಯಕ್ಕೆ ಸೈರನ್ ಅಥವಾ ಸೈನಿಕರ ಬಂದುಗಳ ಶಬ್ದದ ಮೂಲಕ ಎರಡು ನಿಮಿಷಗಳ ಮೌನ ಆಚರಣೆಗೆ ಬೆಳಗ್ಗೆ 10:58 ರಿಂದ 11 ಗಂಟೆವರೆಗೆ ಸೈರನ್ ಅಥವಾ ಬಂದೂಕು ಶಬ್ದ ಮಾಡಿಸುವುದು ಹಾಗೂ ಎರಡು ನಿಮಿಷಗಳ ಮೌನ ಆಚರಣೆಯ ನಂತರ ಪುನಃ 11.02 ರಿಂದ 11.03 ನಿಮಿಷದವರೆಗೆ ಸೈರನ್ ಅಥವಾ ಬಂದೂಕು ಶಬ್ದವನ್ನು ಮಾಡಿಸುವುದು ಈ ಪದ್ಧತಿಯನ್ನು ಸೈರನ್ ಅಥವಾ ಬಂದೂಕು ಸೌಲ್ಯಭ್ಯವಿರುವ ಕಡೆ ಅಳವಡಿಸಿಕೊಳ್ಳಬೇಕು.

     ಸಾಧ್ಯವಾಗುವಂತಹ ಸಂದರ್ಭದಲ್ಲಿ ಎಲ್ಲರೂ ಒಂದಡ ಮೌನವನ್ನು ಆಚರಿಸಬೇಕು. ಆದಾಗ್ಯೂ ಇದು ಕೆಲಸ ಕಾರ್ಯಗಳಿಗೆ ತೀವ್ರ ತೊಂದರೆ ಆಗುವಂತಿದ್ದರೆ ಮೇಲೆ ತಿಳಿಸಿದಂತೆ ಒಂದೇ ಸ್ಥಳದಲ್ಲಿ ಸೇರಲು ಪುಯತ್ನಸದೇ ಇರಬಹುದು. ಸಂಕೇತ (Sigಟಿಚಿಟ) ವ್ಯವಸ್ಥೆ ಇರದಂತಹ ಪ್ರದೇಶದಲ್ಲಿ ಬೆಳಗೆ, 11 ಗಂಟೆಗೆ 2 ನಿಮಿಷಗಳ ಮೌನ ಆಚರಿಸಲು ಸಂಬಂಧಪಟ್ಟವರಿಗೆಲ್ಲ ಸೂಕ್ತ ನಿರ್ದೇಶನವನ್ನು ಕಳುಹಿಸಬೇಕು.

     ಹುತಾತ್ಮರ ದಿನಾಚರಣೆಯನ್ನು ತಪ್ಪದೇ ಅಚರಿಸಬೇಕಾಗಿರುವುದರಿಂದ, ಈ ಉದ್ದೇಶಕ್ಕಾಗಿ ಸೂಚಿಸಲಾಗಿರುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.

      ಹುತಾತ್ಮರ ದಿನವನ್ನು ಪೂರ್ಣ ಪಾವಿತ್ರತೆ ಮತ್ತು ಯೋಗ್ಯವಾದ (beಜಿiಣಣiಟಿg) ರೀತಿಯಲ್ಲಿ ಆಚರಿಸಲು ರಾಜ್ಯದ ಎಲ್ಲಾ ವಿದ್ಯಾ ಸಂಸ್ಥೆಗಳಿಗೆ ಸೂಚನೆ ನೀಡಬೇಕು. ಈ ದಿನದ ವಿಶೇಷತ್ಯಕ್ಕೆ ಸಂಬಂಧಿಸಿದಂತೆ ಭಾಷಣಗಳನ್ನು ಅದರಲ್ಲೂ ವಿಶೇಷವಾಗಿ ಭಾರತದ ಸ್ವಾತಂತ್ರ್ಯದಲ್ಲಿ ಸ್ವಾತಂತ್ರ ಹೋರಾಟಗಾರರ ಪಾತ್ರವನ್ನು ತಿಳಿಸುವ ಭಾಷಣ/ ಚರ್ಚೆಗಳನ್ನು ಏರ್ಪಡಿಸಬೇಕು. ಈ ಭಾಷಣಗಳ ಮುಖ್ಯಾಂಶಗಳಲ್ಲಿ ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯವನ್ನು ಉಳಿಸುವುದು, ಸಂರಕ್ಷಿಸುವುದು ಮತ್ತು ಶ್ರೀಮಂತಗೊಳಿಸುವುದಲ್ಲದೆ, ರಾಷ್ಟ್ರದ ಐಕ್ಯತೆಯನ್ನು ಉತ್ತೇಜಿಸುವುದು ಮತ್ತು ಒಂದೇ ಗುರಿಗಳು ಮತ್ತು ಆದರ್ಶಗಳಿಗೆ ಬದ್ಧರಾಗುವ ಅಂಶಗಳನ್ನೊಳಗೊಂಡಿರಬೇಕು.

      ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಪಾತ್ರ ಮತ್ತು ರಾಷ್ಟ್ರೀಯ ಐಕ್ಯತೆ ಮೂಲ ಉದ್ದೇಶಗಳು ಇರುವ ಸಾಂಸ್ಕøತಿಕ ಕಾರ್ಯಕ್ರಮಗಳ / ಡಾಕ್ಯುಮೆಂಟರಿ ಚಿತ್ರ ಪದರ್ಶನಗಳ ಏರ್ಪಾಡುಗಳನ್ನು ರಾಜ್ಯದ ಪ್ರಚಾರ ಘಟಕಗಳು ಮಾಡಬಹುದು.

       ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲಾ ಪ್ರಾದೇಶಿಕ ಆಯುಕ್ತರು, ಇಲಾಖಾ ಮುಖ್ಯಸ್ಥರು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತಿತರೆ ಸಂಬಂಧಪಟ್ಟ ಅಧಿಕಾರಿಗಳು ಈ ನಿರ್ದೇಶನಗಳನ್ನು ತಕ್ಕುದಾದ ರೀತಿಯಲ್ಲಿ ಅನುಸರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.

         ಹುತಾತ್ಮರ ದಿನವನ್ನು ಆಚರಿಸುವಾಗ ಕೋವಿಡ್ 19 ಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ಹೊರಡಿಸಲಾದ ಮಾರ್ಗಸೂಚಿಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಆಸುಇ (ರಾಜಕೀಯ) ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99