ಮಂಗಳೂರಿಗರೆ ಎಚ್ಚರ- ನಗರದಲ್ಲಿ500 ರ ಕಳ್ಳ ನೋಟು ಹಾವಳಿ- ಇಬ್ಬರು ಖದೀಮರು ಬಲೆಗೆ
Tuesday, January 3, 2023
ಮಂಗಳೂರು: ನಗರದಲ್ಲಿ ಖೋಟಾ ನೋಟು ಸಾಗಾಟ ಮಾಡುತ್ತಿದ್ದ ಇಬ್ಬರು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಟ್ವಾಳದ ಬಿ ಸಿ ರೋಡ್ ನ ನಿಜಾಮುದ್ದೀನ್ ಯಾನೆ ನಿಜಾಂ ( 32 ) ಮತ್ತು ಜೆಪ್ಪು ವಿನ ರಜೀಮ್ ಯಾನೆ ರಾಫಿ, (31 ) ಬಂಧಿತರು.
ಜನವರಿ 2 ರಂದು ಮಂಗಳೂರು ನಗರದ ನಂತೂರು ಬಳಿ ವಾಹನಗಳನ್ನು ತಪಾಸಣೆ ಮಾಡುವ ಸಮಯದಲ್ಲಿ, ನಂತೂರು ಕಡೆಯಿಂದ ಬಂದ, ಒಂದು ಸ್ಕೂಟರ್ ನಲ್ಲಿ ಇಬ್ಬರು ಸವಾರರು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡು ವೇಗವಾಗಿ ಚಲಾಯಿಸಿದ್ದರು. ಪೊಲೀಸರಿಂದ ತಪ್ಪಿಕೊಳ್ಳಲು ಪ್ರಯತ್ನಿಸಿದವರನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರ ಪರಿಶೀಲಿಸಿ ಅವರ ವಶದಲ್ಲಿದ್ದ ರೂ. 500 ಮುಖಬೆಲೆಯ ರೂ. 4,50,000/ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಖೋಟು ನೋಟುಗಳನ್ನು ಬೆಂಗಳೂರಿನಿಂದ ಡ್ಯಾನಿಯಲ್ ಎಂಬಾತನಿಂದ ಪಡೆದು, ಅವುಗಳನ್ನು ಮಂಗಳೂರಿನಲ್ಲಿ ನೋಟುಗಳನ್ನು ಚಲಾವಣೆ ಮಾಡುವ ಬಗ್ಗೆ, ಆರೋಪಿಗಳು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿ ಸ್ಕೂಟರ್ ನಲ್ಲಿ ಅವುಗಳನ್ನು ಚಲಾವಣೆಗೆ ಕೊಂಡು ಹೋಗುತ್ತಿದ್ದ ಸಮಯ ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ನಡೆಸಲಾಗುವುದು. ಈ ಪ್ರಕರಣ ಪತ್ತೆಗೆ ಮುನ್ನ ಬೆಂಗಳೂರಿನಲ್ಲಿ ಡ್ಯಾನಿಯಲ್ ನನ್ನು ಪೊಲೀಸರು ಬಂಧಿಸಿದ್ದರು.
ಬಗ್ಗೆ ಇನ್ನೂ ಹೆಚ್ಚಿನ ವಿಚಾರಣೆ ಅಗತ್ಯ ವಿದ್ದು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
ಆರೋಪಿತರ ವಿವರ:
ಆರೋಪಿತ ನಿಜಾಂ ನ ವಿರುದ್ಧ ದಾಖಲಾದ ಪ್ರಕರಣಗಳು
1.) ವಿಟ್ಲ ಪೊಲೀಸ್ ಠಾಣೆಯಲ್ಲಿ 2015 ರಲ್ಲಿ ಒಂದು ಕೊಲೆ ಪ್ರಕರಣದಲ್ಲಿ ಬಾಗಿ
2) 2015 ರಲ್ಲಿ ಮಂಗಳೂರು ಕಾರಗೃಹದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಭಾಗಿ
3) 2017 ರಲ್ಲಿ ಕೊಡಗಿನ ಕುಶಾಲ ನಗರ ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಭಾಗಿ
4)2018 ರಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿ
5. ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದು ಸುಲಿಗೆ ಪ್ರಕರಣ
2 ನೇ ಆರೋಫಿ ರಾಫೀ ಎಂಬಾತನ ವಿರುದ್ಧ ದಾಖಲದ ಪ್ರಕಣಗಳ ವಿವರ
ಉರ್ವಾ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣದಲ್ಲಿ ಭಾಗಿ
ಮಾನ್ಯ ಪೊಲೀಸ್ ಆಯುಕ್ತರ, ಮಾನ್ಯ ಉಪ-ಪೊಲೀಸ್ ಆಯುಕ್ತರುಗಳ ಮಾರ್ಗದರ್ಶನದಂತೆ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗರವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೂ ನಿರೀಕ್ಷಕರಾದ ಅನಂತ ಪದ್ಮನಾಭ ಕೆ.ವಿ, ಪಿ.ಎಸ್.ಐ ಹಾಗೂ ಸಿಬ್ಬಂಧಿಯವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ