-->

ತಿಮಿಂಗಿಲದ ವಾಂತಿಗೂ ಇದೆ ಕೋಟ್ಯಾಂತರ ಬೆಲೆ- ಮಂಗಳೂರಿನ ಯುವಕರಲ್ಲಿ ಸಿಕ್ಕಿದ್ದೆಷ್ಟು ಗೊತ್ತೆ ?

ತಿಮಿಂಗಿಲದ ವಾಂತಿಗೂ ಇದೆ ಕೋಟ್ಯಾಂತರ ಬೆಲೆ- ಮಂಗಳೂರಿನ ಯುವಕರಲ್ಲಿ ಸಿಕ್ಕಿದ್ದೆಷ್ಟು ಗೊತ್ತೆ ?


ಮಂಗಳೂರು: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ) ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ ಕೋಟ್ಯಾಂತರ ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.ಮಂಗಳೂರು ನಗರದ ಲಾಲ್ ಭಾಗ್ ನ ಕರಾವಳಿ ಮೈದಾನ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್-ಗ್ರೀಸ್(ತಿಮಿಂಗಿಲ ವಾಂತಿ) ನ್ನು ವಶದಲ್ಲಿಟ್ಟು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತ್ರತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ  ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರು

1. ನಿಮಿತ್, ಪ್ರಾಯ(26), ವಾಸ: ಪಡ್ಯಾರು ಮನೆ, ಕುವೆಟ್ಟು ಗ್ರಾಮ, ಗುರುವಾಯಿನಕೆರೆ, ಬೆಳ್ತಂಗಡಿ ತಾಲೂಕು.

2. ಯೋಗೀಶ್, ಪ್ರಾಯ(41), ವಾಸ: ಕುಕ್ಕಳ ಮನೆ & ಗ್ರಾಮ, ಪುಂಜಾಲಕಟ್ಟೆ, ಬೆಳ್ತಂಗಡಿ ತಾಲೂಕು.

ಇವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಅಪರೂಪದ ಹಾಗೂ ಕೋಟ್ಯಾಂತರ ರೂಪಾಯಿ ಬೆಲೆಬಾಳುವ 3.2 ಕೆಜಿ ತೂಕದ ಅಂಬರ್ ಗ್ರೀಸ್(ತಿಮಿಂಗಿಲ ವಾಂತಿ) ನ್ನು  ಹಾಗೂ 2 ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇದಕ್ಕೆ ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 3.2 ಕೋಟಿ ಮೌಲ್ಯವಿರುತ್ತದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. 

ಈ ಅಪರೂಪದ ಬೆಲೆಬಾಳುವ ಅಂಬರ್ ಗ್ರೀಸ್ ಹಾಗೂ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99