-->

 ರಷ್ಯಾದಿಂದ ಗೋವಾಕ್ಕೆ ಹೊರಟಿದ್ದ

ರಷ್ಯಾದಿಂದ ಗೋವಾಕ್ಕೆ ಹೊರಟಿದ್ದ

ವಿಮಾನಕ್ಕೆ ಬಾಂಬ್ ಬೆದರಿಕೆ ನವದೆಹಲಿ: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ರಷ್ಯಾದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಉಜೇಕಿಸ್ತಾನಕ್ಕೆ ತಿರುಗಿಸಲಾಗಿದೆ ಎಂದು ವರದಿಯಾಗಿದೆ.
ರಷ್ಯಾದ ಪೆರ್ಮ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಜುರ್ ಏರ್ ವಿಮಾನವು ಇಬ್ಬರು ಮಕ್ಕಳು ಮತ್ತು 7 ಸಿಬ್ಬಂದಿ ಸೇರಿದಂತೆ ಒಟ್ಟು 245 ಜನರನ್ನು ಹೊತ್ತೊಯ್ಯುತ್ತಿತ್ತು. ಇದು ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4:15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ ನಿರ್ದೇಶಕರಿಂದ 12:30ಕ್ಕೆ ಇಮೇಲ್ ಮೂಲಕ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ವಿಮಾನವನ್ನು ಉಜೇಕಿಸ್ತಾನ್‌ಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99