
ಗಣರಾಜ್ಯೋತ್ಸವದಲ್ಲಿ ಬಾಂಬ್ ಸ್ಫೋಟ ಬೆದರಿಕೆ : ನಾಲ್ವರು ಅರೆಸ್ಟ್
ಅಹಮದಾಬಾದ್ : ದೇಶದಾದ್ಯಂತ ಇಂದು 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ಬೆದರಿಕೆ ಪತ್ರ ಕಳಿಸಿದ್ದ ಪ್ರಕರಣ ಬೆನ್ನಟ್ಟಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಹಮದಾಬಾದ್ ರೈಲು ನಿಲ್ದಾಣ(ಕಲುಪುರ್ ರೈಲು ನಿಲ್ದಾಣ) ಮತ್ತು ಗೀತಾ ಮಂದಿರ ಬಸ್ ನಿಲ್ದಾಣ(ಅಹಮದಾಬಾದ ಅತಿದೊಡ್ಡ ಬಸ್ ನಿಲ್ದಾಣ)ಕ್ಕೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಪತ್ರದಲ್ಲಿ ಬರೆದು ಆರೋಪಿಗಳು ಪೊಲೀಸರಿಗೆ ರವಾನಿಸಿದ್ದರು.
ಅಹಮದಾಬಾದ್ ಕ್ರೈಂ ಬ್ರಾಂಚ್ ಪೊಲೀಸರು 8 ತಂಡಗಳನ್ನ ರಚಿಸಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಓರ್ವ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.